ಹೊಸಪೇಟೆ: ಕೃಷಿ ಇಲಾಖೆಯಿಂದ ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದಿಂದ 2023-24 ನೇ ಸಾಲಿನ ಆಯವ್ಯಯದಲ್ಲಿ ರೈತ ಉತ್ಪಾದಕರ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ ರೂ. 20 ಲಕ್ಷ ವರೆಗಿನ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನ ನೀಡಲಾಗುತ್ತದೆ. ವಿಜಯನಗರ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೂರು ರೈತ ಉತ್ಪಾದಕರ ಸಂಸ್ಥೆಗಳು ಈ ಪ್ರಯೋಜನವನ್ನು ಪಡೆಯಬಹುದಾಗಿದ್ದು, ಅರ್ಜಿ ಸಲ್ಲಿಸಲು 2024ರ ಜನವರಿ 3 ಕೊನೆಯ ದಿನವಾಗಿರುತ್ತದೆ. ಮೊದಲು ಬಂದ ಸೂಕ್ತ ಅರ್ಜಿಗಳಿಗೆ ಸೌಲಭ್ಯ ನೀಡಲಾಗುವುದು.
ಸ್ವೀಕೃತವಾದ ಅರ್ಜಿಗಳಿಗೆ ನಿಯಮಾನಸಾರ ಬಡ್ಡಿ ಸಹಾಯಧನವನ್ನು ಸಂಬAಧಿಸಿದ ರೈತ ಉತ್ಪಾದಕರ ಸಂಸ್ಥೆಗಳ ಸಾಲದ ಖಾತೆಗೆ ಪಾವತಿಸಲಾಗುವುದು. ಜಿಲ್ಲೆಯ ರೈತ ಉತ್ಪಾದಕರ ಸಂಸ್ಥೆಗಳು ತಮ್ಮ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಲು ಹಾಗೂ ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ, ಈ ಯೋಜನೆಯ ಸದುಪಯೊಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ. ಮುದಗಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
				 
         
         
         
															 
                     
                     
                     
                     
                    


































 
    
    
        