ಚಿತ್ರದುರ್ಗ : ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ , ಜಿಲ್ಲಾ ನೀರಾವರಿ ಹೋರಾಟದ ಮುಖಂಡರು ಆದ ಟಿ.ನುಲೇನೂರು ಎಂ.ಶಂಕರಪ್ಪ (68).ಮಂಗಳವಾರ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ವೈದ್ಯ ಡಾ.ರವಿಶಂಕರ್ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರ ಅಗಲಿದ್ದಾರೆ. ಅಂತ್ಯಕ್ರಿಯೆ ಹುಟ್ಡೂರು ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾಮದಲ್ಲಿ ಬುಧವಾರ ಸಂಜೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ನಾಳೆ ಅಂದರೆ ಬುಧವಾರ ಬೆಳಿಗ್ಗೆ 10.30 ಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿ ವೃತ್ತದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.