ರೈಲ್ವೆ ನೇಮಕಾತಿ ಮಂಡಳಿ 9000 ಟೆಕ್ನಿಷಿಯನ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಏ.8ರೊಳಗಾಗಿ ಅಧಿಕೃತ RRB ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
1100 ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್ ಗಳು ಮತ್ತು 7900 ಟೆಕ್ನಿಷಿಯನ್ ಗ್ರೇಡ್ 3 ಸಿಗ್ನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್ ಹುದ್ದೆಗೆ ಅಭ್ಯರ್ಥಿಗಳ ಗರಿಷ್ಠ ವಯಸ್ಸು 18 ರಿಂದ 36 ವರ್ಷಗಳು, ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗೆ ಅರ್ಜಿ ಸಲ್ಲಿಸುವ
ಅಭ್ಯರ್ಥಿಗಳಿಗೆ 18 ರಿಂದ 33 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.