ತಿರುವನಂತಪುರ: ಕ್ರಿಪ್ಟೋ ಕರೆನ್ಸಿ ತನಿಖೆಗಾಗಿ ಕೇರಳಕ್ಕೆ ಬಂದಿದ್ದ ಬೆಂಗಳೂರು ವೈಟ್ ಫೀಲ್ಡ್ ಪೊಲೀಸ್ ನ ನಾಲ್ವರು ಅಧಿಕಾರಿಗಳನ್ನು ಲಂಚ ಸ್ವೀಕರಿಸಿದ ಆರೋಪದಲ್ಲಿಕೇರಳದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ವೈಟ್ ಫೀಲ್ಡ್ ಪೊಲೀಸ್ ಅಧಿಕಾರಿಗಳು ಕೊಚ್ಚಿಯ ಕುಂಬಲಂಗಿಯಿಂದ ಇಬ್ಬರನ್ನು ಕಸ್ಟಡಿಗೆ ತೆಗೆದುಕೊಂಡಿದ್ದರು. ಈ ಇಬ್ಬರನ್ನು ಬಿಡುಗಡೆ ಮಾಡಲು 10 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಪಾವತಿಸಿದ ಹೊರತಾಗಿಯೂ ಪೊಲೀಸ್ ಅಧಿಕಾರಿಗಳು ಇಬ್ಬರನ್ನು ಬಿಡುಗಡೆ ಮಾಡಿರಲಿಲ್ಲ ಎಂದು ಕುಟುಂಬ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೊಚ್ಚಿ ನಗರದಲ್ಲಿ ಪೊಲೀಸರು ವಾಹನ ಹಾಗೂ ನಗದನ್ನು ಪತ್ತೆ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮಲಯಾಳಂ ಮಾಧ್ಯಮಗಳು ವರದಿ ಮಾಡಿವೆ. ಬಂಧಿತ ಪೋಲೀಸರ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.