ಬೆಂಗಳೂರು : ಲಂಚ ಪಡೆಯುವ ಸಮಯದಲ್ಲಿ ನಗರದ ಹನುಮಂತ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಸ್ಟೇಬಲ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿರುವುದಾಗಿ ವರದಿಯಾಗಿದೆ. ಹನುಮಂತ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಕವಿನ್ ಸಿಕ್ಕಿಬಿದ್ದಿದ್ದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. ವಾಹನವೊಂದನ್ನು ಬಿಡುಗಡೆ ಮಾಡಲು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶಿವಕುಮಾರ್ ಎಂಬುವರು ಲೋಕಾಯಕ್ತಕ್ಕೆ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೊಂಡು ಹೆಡ್ ಕಾನ್ಸ್ಟೇಬಲ್ ಕವಿನ್ ಅವರು 20 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಈ ಕುರಿತು ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆಂದು ಲೋಕಾಯುಕ್ತ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.