ಕಳೆದ ಒಂದು ವರ್ಷದಲ್ಲಿ 7 ನವಜಾತ ಶಿಶುಗಳನ್ನ ಹತ್ಯೆ ಮಾಡಿ, ಇನ್ನೂ 6 ಶಿಶುಗಳನ್ನು ಕೊಲ್ಲಲು ಪ್ರಯತ್ನಿಸಿದ್ದ ಬ್ರಿಟಿಷ್ ನರ್ಸ್ ಒಬ್ಬಳನ್ನು ತಪ್ಪಿತಸ್ಥೆ ಎಂದು ನ್ಯಾಯಾಲಯ ಪರಿಗಣಿಸಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಕ್ರೌನ್ ಪ್ರಾಸಿಕ್ಯೂಷನ್ ಸೇವೆ ತಿಳಿಸಿದೆ.
ಹಂತಕಿ ಲೂಸಿ ಲೆಟ್ಬಿ ಎಂದು ಗುರುತಿಸಲಾಗಿದ್ದು, 2015ರ ಜೂನ್ ರಿಂದ 2016ರ ಜೂನ್ ನಡುವೆ ವಾಯವ್ಯ ಇಂಗ್ಲೆಂಡ್‌ನ ಕೌಂಟೆಸ್ ಆಫ್ ಚೆಸ್ಟರ್ ಆಸ್ಪತ್ರೆಯಲ್ಲಿ ಈ ಸರಣಿ ಕೊಲೆಗಳನ್ನ ಮಾಡಿದ್ದಾಳು. ಕಳೆದ ಅಕ್ಟೋಬರ್‌ನಿಂದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಆ. 18ರಂದು ಈ ಕುರಿತು ವಿಚಾರಣೆ ನಡೆಸಿದ ಇಂಗ್ಲೆಂಡ್‌ನ ಕೋರ್ಟ್ ಶಿಶುಹತ್ಯೆಯ ಆರೋಪಿ ನರ್ಸ್ ಗೆ ಶಿಕ್ಷೆ ವಿಧಿಸಲು ಮುಂದಾಗಿದೆ. ಈಕೆಗೆ ಶಿಕ್ಷೆ ವಿಧಿಸಲು ಭಾರತೀಯ ಮೂಲದ ಮಕ್ಕಳ ವೈದ್ಯರ ಸಲಹೆಗಾರ ಡಾ.ರವಿ ಜಯರಾಮ್ ಸಹಕರಿಸಿದ್ದಾರೆ.