ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಏಕನಾಥ್ ಶಿಂಧೆ ಸರ್ಕಾರ ಸೋಮವಾರ ಮಹತ್ವದ ನಿರ್ಧಾರ ಕೈಗೊಂಡಿದೆ.ಮುಂಬೈಗೆ ಪ್ರವೇಶಿಸುವ ಎಲ್ಲಾ ಐದು ಟೋಲ್ ಬೂತ್‌ಗಳಲ್ಲಿ ಲಘು ಮೋಟಾರು ವಾಹನಗಳಿಗೆ ಟೋಲ್ ಶುಲ್ಕವನ್ನು ಸಂಪೂರ್ಣವಾಗಿ ರದ್ದುಗೊಳಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಸರ್ಕಾರದ ಈ ಮಹತ್ವದ ನಿರ್ಧಾರ ಇಂದು ಮಧ್ಯರಾತ್ರಿ 12 ಗಂಟೆಯಿಂದಲೇ ಜಾರಿಗೆ ಬರಲಿದೆ.
ಸರ್ಕಾರದ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ ಸಚಿವ ದಾದಾಜಿ ದಗ್ದು ಭೂಸೆ, ಮಧ್ಯರಾತ್ರಿಯ ನಂತರ ಲಘು ವಾಹನಗಳಿಗೆ ಟೋಲ್‌ನಿಂದ ವಿನಾಯಿತಿ ನೀಡಲಾಗುವುದು ಎಂದು ಹೇಳಿದ್ದಾರೆ. ಮುಂಬೈಗೆ ಪ್ರವೇಶಿಸುವ ಸಮಯದಲ್ಲಿ, ದಹಿಸರ್ ಟೋಲ್, ಆನಂದ್ ನಗರ ಟೋಲ್, ವೈಶಾಲಿ, ಐರೋಲಿ ಮತ್ತು ಮುಲುಂಡ್ ಸೇರಿದಂತೆ 5 ಟೋಲ್ ಪ್ಲಾಜಾಗಳಿವೆ. ಇಂದು ಮಧ್ಯರಾತ್ರಿ 12 ಗಂಟೆಯ ನಂತರ ಲಘು ವಾಹನಗಳಿಗೆ ಟೋಲ್ ವಿನಾಯಿತಿ ನೀಡಲು ಸರ್ಕಾರ ನಿರ್ಧರಿಸಿದೆ.
ಈ ಮೂಲಕ ವಾಹನ ಸವಾರರು ಸರತಿ ಸಾಲಿನಲ್ಲಿ ಕಳೆಯುವ ಸಮಯವನ್ನು ಉಳಿಸಲಾಗುತ್ತದೆ. ಈ ಬಗ್ಗೆ ಹಲವು ತಿಂಗಳಿಂದ ಸರ್ಕಾರ ಚರ್ಚೆ ನಡೆಸಿದ್ದು, ಇಂದು ಈ ನಿರ್ಧಾರ ಕೈಗೊಳ್ಳಲಾಗಿದೆ.