ಲವ್ ಜಿಹಾದ್ ವಿರುದ್ದ ಅಭಿಯಾನ ಆರಂಭಿಸಿದ ಶ್ರೀರಾಮಸೇನೆ ಮೇಲೆ ಬಾಂಬ್ ಹಾಕುವ ಹಾಗೂ ಜೀವ ತೆಗೆಯುವ ಬೆದರಿಕೆಗಳು ಕೇಳಿಬರುತ್ತಿವೆ.
ಶ್ರೀರಾಮಸೇನೆ ಹೆಲ್ಪ್, ಲೈನ್ಗೆ 170ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿವೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ ಗಂಭೀರ ಆರೋಪ ಮಾಡಿದ್ದಾರೆ.
ಶ್ರೀರಾಮಸೇನೆ ಸಂಘಟನೆ ಮುಖಂಡರ ಫೇಸ್ ಬುಕ್ ಅಕೌಂಟ್ ಅನ್ನು ಕೂಡ ಕ್ಲೋಸ್ ಮಾಡಿದ್ದಾರೆ.
ಕಳೆದ ಎರಡು ದಿನಗಳಿಂದ ಫೇಸ್ ಬುಕ್ ಬಂದ್ ಆಗಿದೆ ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಆರೋಪ ಮಾಡಿದ್ದಾರೆ.