ಲಿಂಗಾಯತ ಸಮುದಾಯದ ಅಧಿಕಾರಿಗಳ ಮೂಲೆಗುಂಪು.! ಶಾಮನೂರು ವಿರುದ್ಧ ಹೈಕಮಾಂಡಿಗೆ ದೂರು.!

 

 

ಬೆಂಗಳೂರು :  ಲಿಂಗಾಯತ ಸಮುದಾಯದ ಅಧಿಕಾರಿಗಳನ್ನು ಮೂಲೆಗುಂಪು ಮಾಡಿದ್ದು ಸೂಕ್ತವಾದ ಸ್ಥಾನಮಾನ ನೀಡಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಕ್ರಪ್ಪ ಅವರ ಹೇಳಿಕೆ ಈಗ ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಮೂಡಿಸಿದೆ. ಈ ರೀತಿ ಬಹಿರಂಗ ಹೇಳಿಕೆ ನೀಡಿರುವ ಕುರಿತಾಗಿ ಶಾಮನೂರು ಶಿವಶಂಕರಪ್ಪ ವಿರುದ್ಧ ಕಾಂಗ್ರೆಸ್ ಹೈಕಮಾಂಡಿಗೆ ದೂರು ಸಲ್ಲಿಕೆಯಾಗಿದೆಯಂತೆ.?

Advertisement

ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಶಾಮನೂರು, ರಾಜ್ಯದಲ್ಲಿ ವೀರಶೈವ ಲಿಂಗಾಯತ ಅಧಿಕಾರಿಗಳು ಮೂಲೆಗುಂ ಪಾಗಿದ್ದಾರೆ. ಪ್ರಮುಖ ಹುದ್ದೆ ಸಿಗದ ಅವರ ಸ್ಥಿತಿ ನಾಯಿಪಾಡಾಗಿದೆ. ಮುಖ್ಯಮಂತ್ರಿಗಳು ಅವರ ಸಮುದಾಯದವರಿಗೆ ಪ್ರಮುಖ ಹುದ್ದೆ ನೀಡಿದ್ದಾರೆ ಎಂದು ಆರೋಪ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಯಾವ್ಯಾವ ಆಯಕಟ್ಟಿನ ಹುದ್ದೆಗಳಲ್ಲಿ ಅವಕಾಶ ನೀಡಲಾಗಿದೆ ಎಂಬ ಪಟ್ಟಿ ಸಹಿತ ಹೈಕಮಾಂಡ್ ಗೆ ದೂರು ಸಲ್ಲಿಸಲಾಗಿದೆ.!

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement