ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 13 ತಿಂಗಳಾಗಿದೆ. ಒಂದಾದ ಮೇಲೆ ಒಂದರಂತೆ ಬ್ರಹ್ಮಾಂಡ ಭ್ರಷ್ಟಾಚಾರಗಳು, ಲೂಟಿ ಮಾಡಲು ಹೆಬ್ಬಾಗಿಲು ತೆಗೆದು, ಲೂಟಿಗಾಗಿ ಸುರಂಗ ಕೊರೆಯುವ ಕೆಲಸವನ್ನ ಕಾಂಗ್ರೆಸ್ ಮಾಡ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪ ಮಾಡಿದ್ದಾರೆ.
ಮೊನ್ನೆ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು `ಪಟಾಪಟ್’ ಎಂದು ರಾಹುಲ್ ಗಾಂಧಿಯವರು ಹೇಳಿದ ಮಾದರಿಯಲ್ಲಿ ಬೇನಾಮಿ ಖಾತೆಗಳು, ಬಾರ್‌ಗಳು, ವೈನ್ ಸ್ಟೋರ್‌ಗಳಿಗೆ ವರ್ಗಾಯಿಸಿದರು. ಲ್ಯಾಂಬೊರ್ಗಿನಿ, ಒಡವೆ- ಏನೇನು ಬೇಕೋ ಅವೆಲ್ಲವನ್ನೂ ಖರೀದಿಸಿದರು. ದಲಿತರ ಹಣ ಚಿನ್ನದ ಅಂಗಡಿಗೆ, ಕಾರು ಖರೀದಿಗೆ, ಬಾರ್‌ಗಳಿಗೆ, ಕಾಂಗ್ರೆಸ್ ಪಕ್ಷಕ್ಕೆ ಹೋಗಿದೆ ಎಂದು ತಿಳಿಸಿದರು.
ಲೂಟಿ ಹೊಡೆಯೋಕೆ ಸರ್ಕಾರ ಸಿದ್ದತೆ ಮಾಡ್ತಿದೆ. ಒಂದಾದ ಮೇಲೊಂದು ಹಗರಣ ನಡೀತಿದೆ. ತೆಲಂಗಾಣ ಹಾಗೂ ಹೈದ್ರಾಬಾದ್ ಲೂಟಿ ಹಣ ಹೋಗಿದೆ. ನಾವು ಹೋರಾಟ ಮಾಡಿದ್ದಕ್ಕೆ ಸಚಿವರು ರಾಜೀನಾಮೆ ಕೊಟ್ಟಿದ್ರು. ರಾಜ ಭವನಕ್ಕೆ ಹೋದ್ಮೇಲೆ ಸಚಿವರು ರಾಜೀನಾಮೆ ನೀಡಿದ್ರು. ನಮ್ಮ ಹೋರಾಟವನ್ನ ಹತ್ತಿಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.