ಬೆಂಗಳೂರು: ಲೈಂಗಿಕ ಕಿರುಕುಳದ ಆರೋಪವನ್ನು ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ಈ ವೇಳೆ ರೇವಣ್ಣ ಪರ ವಕೀಲರು ಬಲವಂತದ ಕ್ರಮ ಕೈಗೊಳ್ಳದಂತೆ ವಾದ ಮಂಡಿಸಿದ್ದಾರೆ.
ಇನ್ನು ಎಸ್ಐಟಿ ಪರವಾಗಿ ವಾದ ಮಂಡಿಸಿದ ಎಸ್ಪಿಪಿ ಜಗದೀಶ್ ಅವರು, ಸೆಕ್ಷನ್ 376 ಸೇರ್ಪಡೆ ಮಾಡಿಲ್ಲ. 376 ಅಲ್ಲದೆ ಬೇರೆ ಯಾವುದು ನಾನ್ ಬೇಲೆಬಲ್ ಸೆಕ್ಷನ್ ಹಾಕಲ್ಲ ಎಂದು ಹೇಳಿದ್ದಾರೆ. ಹೀಗಾಗಿ ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದಿದ್ದಾರೆ.