ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ)ಕ್ಕೆ ಕರೆದೊಯ್ಯದಿದ್ದಾರೆ.ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು (ಜೂ.18) ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನ್ಯಾಯಾಲಯದ ವಿಚಾರಣೆ ವೇಳೆ ನ್ಯಾಯಾದೀಶರ ಎದುರು ಪ್ರಜ್ವಲ್ ರೇವಣ್ಣ ಅಳಲು ತೋಡಿಕೊಂಡಿದ್ದಾರೆ. ನಾನು ಎರಡು ಪ್ರಕರಣದಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ಮತ್ತೆ ಅದೇ ಟೆಸ್ಟ್ ಮಾಡಿಸಲು ಹೇಳುತ್ತಾರೆ. ಇದು ತುಂಬಾ ಮುಜುಗರ ಆಗತ್ತೆ ಎಂದು ಹೇಳಿದ್ದಾನೆ. ಇದನ್ನ ಪರಿಶೀಲನೆ ಮಾಡುತ್ತೇನೆ ಎಂದು ನ್ಯಾಯಾದೀಶರು ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ರಾಜ್ಯದ ಮೊದಲ ಹಂತದ ಮತದಾನ (ಏ.26)ಕ್ಕೂ ಮುನ್ನ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ್ ವಿಡಿಯೋಗಳ ಪೆನ್ಡ್ರೈವ್ ಹಾಸನ ಜಿಲ್ಲೆಯಲ್ಲಿ ಹರಿದಾಡಲು ಆರಂಭಿಸಿತು.
ಈ ಸಂಬಂಧ ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ನಡುವೆ ತಮ್ಮ ಮನೆಯ ಮಹಿಳಾ ಕೆಲಸದಾಳಕೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆ ನರಸೀಪುರ ಪೊಲೀಸ್ ಠಾಣೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.