ಬೆಂಗಳೂರು: ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ವಿಶೇಷ ತನಿಖಾ ತಂಡ (ಎಸ್ ಐಟಿ) ಮುಖ್ಯಸ್ಥ ಬಿ.ಕೆ.ಸಿಂಗ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಬಾರದು. ಈ ರೀತಿ ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದೆ ಎಂದರು.
ಈ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಸಹಾಯವಾಣಿ ನಂಬರ್ 63609 38947 ಗೆ ಬೆಳಿಗ್ಗೆ 8 ರಿಂದ ರಾತ್ರಿ 8ರ ನಡುವೆ ಕರೆ ಮಾಡಬಹುದು. ನಮಗೆ ಕರೆ ಮಾಡುವ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವಿಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.