ನವದೆಹಲಿ : ವಿರೋಧ ಪಕ್ಷಗಳ ವಿರೋಧದ ನಡುವೆ ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದೆ.
ಬಿಜೆಪಿ ಮತ್ತು ಸಮಾಜವಾದಿ ಪಾರ್ಟಿ (ಎಸ್ಪಿ) ಈಗಾಗಲೇ ಪಕ್ಷದ ಲೋಕಸಭಾ ಸದಸ್ಯರಿಗೆ ವಿಪ್ ಜಾರಿಗೊಳಿಸಿದ್ದವು. ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2024 ರ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯಿತು. ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ.
ಕಾಂಗ್ರೆಸ್ ಕೂಡ ಆರಂಭದಲ್ಲಿ ಮಸೂದೆಯನ್ನು ವಿರೋಧಿಸಿತ್ತು. 1995 ರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ಇದೇ ಮೊದಲಲ್ಲ. ಈ ಕಾನೂನನ್ನು 2013 ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ತಿದ್ದುಪಡಿ ಮಾಡಲಾಗಿತ್ತು.