ಲೋಕಸಭೆ ಚುನಾವಣೆ: ಇಬ್ಬರು ಬೇಜವಾಬ್ದಾರಿ ಶಿಕ್ಷಕಿಯರು ಅಮಾನತ್.!

 

ವಿಜಯನಗರ:  ಜಿಲ್ಲೆಯಲ್ಲಿ ಲೋಕಸಭೆ ಚುನಾವಣಾ ಕಾರ್ಯ ನಿರ್ವಹಿಸಲು ನಿರಾಕರಿಸಿ ಬೇಜವಾಬ್ದಾರಿ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕಿಯರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಇಬ್ಬರು ಬಿಎಲ್ಓಗಳನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಗುರುವಾರ ಆದೇಶ ಹೊರಡಿಸಿದ್ದಾರೆ.

Advertisement

ಗುಡೆಕೋಟೆ ಹೋಬಳಿಯ ಮತಗಟ್ಟೆ ಸಂಖ್ಯೆ 120ರ ಅಧಿಕಾರಿ ಮಮತಾ ಮತ್ತು ಮತಗಟ್ಟೆ 119ರ ಅಧಿಕಾರಿ ಸುನಂದಾ ಅಮಾನತುಗೊಂಡ ಸಹಶಿಕ್ಷಕರಾಗಿದ್ದಾರೆ. ಇಲಾಖಾ ವಿಚಾರಣೆ ಕಾಯ್ದಿರಿಸಿ ಇವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement