ಲೋಕಸಭೆ ಚುನಾವಣೆ: ಮತದಾನದ 2 ದಿನ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ರಾಜ್ಯದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ಚುನಾವಣೆಯ ಎರಡೂ ದಿನವೂ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದೆ. ಹಾಗೂ ಎರಡನೇ ಹಂತದ ಮತದಾನವು ಮೇ 7 ರಂದು ನಡೆಯಲಿದೆ. ಮತದಾನ ನದೆಯುವ ಈ ಎರಡೂ ದಿನಗಳಂದು ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಿಸಿರುವುದಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇನ್ನು ಈ ಎರಡು ದಿನಗಳಂದು ಪ್ರತಿಯೊಬ್ಬರು ಮತದಾನ ಮಾಡಲಿ ಎಂಬ ಉದ್ದೇಶದಿಂದ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement