ದೇಶದಲ್ಲಿ ಈಗ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ 377 ಸೀಟು ಗೆಲ್ಲಲಿದೆ ಎಂದು ರೀ ನ್ಯೂಸ್-ಮ್ಯಾಟ್ರಿಜ್ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.
ಕಳೆದ ಚುನಾವಣೆಯಲ್ಲಿ ಎನ್ಡಿಎ 351 &ಯುಪಿಎ 90 ಸ್ಥಾನ ಗಳಿಸಿತ್ತು. ಇನ್ನು ಕರ್ನಾಟಕದಲ್ಲಿ ಎನ್ಡಿಎ 23 & ಕಾಂಗ್ರೆಸ್ 5 ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 25, ಕಾಂಗ್ರೆಸ್ 1, ಜೆಡಿಎಸ್ 1, ಪಕ್ಷೇತರರು ಒಂದು ಸ್ಥಾನ ಗೆದ್ದಿದ್ದರು. ಏಪ್ರಿಲ್ನಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ.