ಬೆಂಗಳೂರು: ಚೈತ್ರಾ ಕುಂದಾಪುರ ಗ್ಯಾಂಗ್ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿರುವ 3ನೇ ಆರೋಪಿ ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಸಿಸಿಹೆಚ್ 57 ಕೋರ್ಟ್ ಮುಂದೂಡಿದೆ.
ಅಭಿನವ ಹಾಲಶ್ರೀ ಪರ ವಕೀಲ ಅರುಣ್ ಶ್ಯಾಮ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು.
ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ. ಹಾಗಾಗಿ ಸೆ.19ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಇನ್ನು ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.