ಉತ್ತರ ಪ್ರದೇಶ: ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳಿಂದ ಮತ್ತೆ ಕಲ್ಲು ತೂರಾಟ ನಡೆದಿದೆ. ಘಟನೆಯಿಂದ ಕೋಚ್‌ನ ಗಾಜು ಪುಡಿಯಾಗಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ.
ರೈಲು ಗೋರಖ್‌ಪುರದಿಂದ ಲಖನೌಗೆ ತೆರಳುತ್ತಿದ್ದ ವೇಳೆ ಬಾರಾಬಂಕಿಯ ಸಫೇದಾಬಾದ್ ರೈಲು ನಿಲ್ದಾಣದ ಬಳಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ ಎನ್ನಲಾಗಿದೆ.
ಘಟನೆಯ ಬಗ್ಗೆ ರೈಲ್ವೆ ರಕ್ಷಣಾ ಪಡೆ ಬೆಂಗಾವಲು ತಂಡ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಆರ್‌ಎಫ್‌ಪಿ ಇನ್ಸ್‌ಪೆಕ್ಟರ್ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಸರ್ಕಾರಿ ಆಸ್ತಿ ಹಾನಿ ಹಾಗೂ ಸಾರ್ವಜನಿಕ ಆಸ್ತಿ ಹಾನಿ ಮಾಡುವ ಮೂಲಕ ಪ್ರಯಾಣಿಕರ ಜೀವಕ್ಕೆ ಅಪಾಯ ತಂದಿರುವ ಬಗ್ಗೆ ಸಂಬಂಧಪಟ್ಟ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.