ಸಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: :
ಭಕ್ತಿಯೆಂಬ ಪಿತ್ತ ತಲೆಗೇರಿ ಕೈಲಾಸದ ಬಟ್ಟೆಯ ಹತ್ತುವ ವ್ಯರ್ಥರ ಕಂಡು
ಎನ್ನ ಮನ ನಾಚಿತ್ತು, ನಾಚಿತ್ತು.
ಕೈಲಾಸವೆಂಬುದೇನೊ, ಪೃಥ್ವಿಯ ಮೇಲೊಂದು ಮೊರಡಿ,
ಆ ಪೃಥ್ವಿಗೆ ಲಯವುಂಟು, ಆ ಮೊರಡಿಗೆಯು ಲಯವುಂಟು,
ಅಲ್ಲಿರ್ಪ ಗಂಗೆವಾಳುಕಸಮರುದ್ರರಿಗೂ ಲಯವುಂಟು,
ಇದು ಕಾರಣ,
‘ಯದ್ಧೃಷ್ಟಂ ತನ್ನಷ್ಟಂ’ ಎಂಬ ಶ್ರುತಿಯ ನೋಡಿ ತಿಳಿದು,
ಬಟ್ಟಬಯಲು ತುಟ್ಟತುದಿಯ ಮೆಟ್ಟಿನಿಂದ
ಕೂಡಲಸಂಗಾ, ನಿಮ್ಮ ಶರಣ.
-ಬಸವಣ್ಣ