ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: :
ನಿನ್ನ ಸೋದಿಸುವಡೆ ಎನ್ನ ಕೈಯಲ್ಲಿ ಆಗದು.
ಎಳ್ಳಿನೊಳಗಣ ಎಣ್ಣೆಯಂತೆ, ಹಣ್ಣಿನೊಳಗಣ ರುಚಿಯಂತೆ,
ಹೂವಿನೊಳಗಣ ಸಂಜ್ಞೆಯಂತೆ, ತರುಧರ ಅಗ್ನಿಯ ಕೂಟದಂತೆ,
ಕಂಡಡೆ ಕರಗಿ, ಕಾಣದಡೆ ಬಿರುಬಾಗಿ, ಇವರಂಗವ ಕಂಡು ಅಡಗಿದೆಯೆ ?
ನಿನ್ನ ಸಂಗವನರಿವುದಕ್ಕೆ ಎನ್ನಂಗದ ಇರವಾವುದು ?
ತನುವ ದಂಡಿಸುವುದಕ್ಕೆ ನೀ ಸರ್ವಮಯ, ನಿನ್ನ ಖಂಡಿಸುವದಕ್ಕೆ ನೀ ಪರಿಪೂರ್ಣ.
ಎನ್ನ ಮರೆದು, ನಿನ್ನ ಕಾಬುದಕ್ಕೆ ಒಳಗಿಲ್ಲ.
ನಿನ್ನ ಕಾಬುದಕ್ಕೆ ನೀ ಅಲೇಖಮಯ ಅನಂತಶೂನ್ಯ, ಕಲ್ಲಿನ ಮರೆಯಾದೆಯಲ್ಲಾ, ಎಲ್ಲರಿಗೆ ಅಂಜಿ.
-ವಚನಭಂಡಾರಿ ಶಾಂತರಸ