ಬೆಂಗಳೂರು: ವನ್ಯಜೀವಿಗಳ ಸಂರಕ್ಷಣಾ ಕಾಯಿದೆ 1972 ಏನು ಹೇಳುತ್ತೆ ಅಂದ್ರೆ ವನ್ಯಜೀವಿಗಳ ಅಂಗಾಂಗ, ಅವಶೇಷಗಳ ಮಾರಾಟ ಅಥವಾ ಬಳಕೆಗೆ ಸಂಪೂರ್ಣ ನಿಷೇಧವಿದೆ.
ಕಾಡು ಪ್ರಾಣಿಗಳ ಚರ್ಮವನ್ನು ಹದ ಮಾಡಿ ಅಲಂಕಾರಿಕ ವಸ್ತುಗಳಾಗಿ ಬಳಸುವಂತಿಲ್ಲ. ವನ್ಯಜೀವಿಗಳ ಮಾಂಸ ಮಾರಾಟ ಹಾಗೂ ಭಕ್ಷಣೆ ಸಹ ಅಪರಾಧ.
ಹಾವಿನ ವಿಷವನ್ನೂ ಸಂಗ್ರಹ ಮಾಡುವಂತಿಲ್ಲ. ನವಿಲು ಗರಿಗಳನ್ನೂ ಸಂಗ್ರಹಿಸುವಂತಿಲ್ಲ. ವನ್ಯಜೀವಿಗಳ ಕೂದಲು, ಚರ್ಮ, ಉಗುರು, ಗೊರಸು, ಹಲ್ಲು, ಆನೆ ದಂತ ಸೇರಿದಂತೆ ಸಂಗ್ರಹಿಸುವುದು, ಸಾಗಿಸುವುದು, ಮಾರಾಟ ಮಾಡುವುದು ಹಾಗೂ ಬಳಕೆ ಶಿಕ್ಷಾರ್ಹ ಅಪರಾಧವಾಗಿದೆ.