ವಯನಾಡ್: ಭೂಕುಸಿತದಿಂದ ವಯನಾಡ್ ಜಿಲ್ಲೆಯಲ್ಲಿ ಅನೇಕ ಸಾವು-ನೋವುಗಳು ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪರಿಣಾಮ ಜನರು ತಮ್ಮ ಮನೆಗಳನ್ನು ತೊರೆದು ನಿರಾಶ್ರಿತ ಕೇಂದ್ರಗಳಲ್ಲಿ ವಾಸಿಸುವಂತ ಪರಿಸ್ಥಿತಿ ಉಂಟಾಗಿದೆ. ಈ ವೇಳೆ ಖಾಲಿ ಇರುವ ಮನೆಗಳಲ್ಲಿ ಕಳ್ಳತನ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ತಾವು ಬಿಟ್ಟು ಬಂದಿರುವ ಮನೆಗಳಲ್ಲಿ ಕಳ್ಳತನ ನಡೆಯುತ್ತಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳರು ಈ ಸಮಯದ ಲಾಭವನ್ನು ಪಡೆದು ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದಾರೆ. ಈ ಸ್ಥಳಗಳಲ್ಲಿ ಪೊಲೀಸರು ಗಸ್ತು ಹೆಚ್ಚಿಸಬೇಕು. ಕಳ್ಳರನ್ನು ಹಿಡಿದು ಶಿಕ್ಷಿಸಬೇಕು ನಿರಾಶ್ರಿತ ಕೇಂದ್ರಗಳಲ್ಲಿ ವಾಸಿಸುತ್ತಿರುವ ಜನರು ಆಗ್ರಹಿಸಿದ್ದಾರೆ.
ನಾವು ಭೂಕುಸಿತದಿಂತಾಗಿ ನಮ್ಮನ್ನು ರಕ್ಷಿಸಿಕೊಳ್ಳಲು ನಾವು ಮನೆಗಳನ್ನು ತ್ಯಜಿಸಿದ್ದೇವೆ. ಆದರೆ ಅದರ ನಂತರ ನಮ್ಮ ಮನೆಯ ಸ್ಥಿತಿಯನ್ನು ಪರಿಶೀಲಿಸಲು ನಾವು ಹಿಂತಿರುಗಿದಾಗ, ಬಾಗಿಲು ಮುರಿದು ತೆರೆದಿರುವುದನ್ನು ನೋಡಿದ್ದೇವೆ. ಜೊತೆಗೆ ತಾವು ತಂಗಿರುವ ರೆಸಾರ್ಟ್‌ನಲ್ಲಿರುವ ಅವರ ಕೊಠಡಿಯನ್ನು ಕೂಡ ಕಳ್ಳರು ಗುರಿಯಾಗಿಸಿಕೊಂಡು ಅವರ ಬಟ್ಟೆಗಳನ್ನು ಕದ್ದೊಯ್ದಿದ್ದಾರೆ ಎಂದು ಸಮತ್ರಸ್ತರು ದೂರಿದ್ದಾರೆ.
ಚೂರಲ್ಮಲಾ, ಮುಂಡಕ್ಕೈ ಸೇರಿದಂತೆ ವಿಪತ್ತು ಪೀಡಿತ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಆರಂಭಿಸಲಾಗಿದೆ. ಸಂತ್ರಸ್ತರ ಮನೆಗಳಿಗೆ ರಾತ್ರಿಯಲ್ಲಿ ಅನುಮತಿಯಿಲ್ಲದೆ ಪ್ರವೇಶಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.