ಮಡಿಕೇರಿ: 2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ/ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರ ಆನ್‍ಲೈನ್ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಬೇಕಿರುತ್ತದೆ.
ವಿಧಾನಸೌಧದಲ್ಲಿ ನಮಾಜ್ ಮಾಡಲು ಕೊಠಡಿ ನೀಡಬೇಕು – ಬಿ.ಎಂ. ಫಾರೂಖ್ ಮನವಿ
ಅದರಂತೆ ಕೊಡಗು ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ /ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರುಗಳಿಗೆ ಆನ್‍ಲೈನ್ ಕೌನ್ಸಿಲಿಂಗ್ ಜುಲೈ, 11 ರ ಬೆಳಗ್ಗೆ 10 ಗಂಟೆಯಿಂದ ಜುಲೈ, 17 ರವರೆಗೆ ನಡೆಯಲಿದೆ. ವೇಳಾಪಟ್ಟಿಯನುಸಾರ ಸಂಬಂಧಿಸಿದ ಶಿಕ್ಷಕರು ನಿಗಧಿತ ದಿನಾಂಕದಂದು ಕೌನ್ಸಿಲಿಂಗ್‍ಗೆ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ತಿಳಿಸಿದ್ದಾರೆ.