ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್.!

WhatsApp
Telegram
Facebook
Twitter
LinkedIn

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದ ಕೂಡಲೇ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಆರಂಭಿಸಲಾಗುವುದು. ಜೂನ್ ಒಳಗೆ ಶಿಕ್ಷಕರ ವರ್ಗಾವಣೆ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ವರ್ಗಾವಣೆಯಲ್ಲಿ ಹೆಚ್ಚುವರಿ ಶಿಕ್ಷಕರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ನಂತರ ನಿಯಮದಂತೆ ಇತರೆ ಶಿಕ್ಷಕರಿಗೆ ಆದ್ಯತೆಯ ಮೇಲೆ ಸ್ಥಳ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಶೀಘ್ರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು. ಕಳೆದ ಬಾರಿಯಂತೆ 2026-27ನೇ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ಅತಿಥಿ ಶಿಕ್ಷಕರ ನೇಮಕ ಮಾಡಲಾಗುವುದು. ಪದವಿಪೂರ್ವ ಕಾಲೇಜಿನ 247 ಪ್ರಾಂಶುಪಾಲರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಸೇವಾ ನಿರತ ಉಪನ್ಯಾಸಕರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon