ಹೊಸಪೇಟೆ: ಜಿಲ್ಲೆಯಲ್ಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ, ಡಾ. ಬಿ.ಆರ್.ಅಂಬೇಡ್ಕರ್, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧಿತತ್ವ, ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 2024-25 ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು.
5ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ವಸತಿ ಶಾಲೆಗಳಿಗೆ ದಾಖಲಿಸಲು, ಡಿ.31 ರೊಳಗಾಗಿ ವಸತಿ ಶಾಲೆ, ಕಾಲೇಜುಗಳ ಮೂಲಕ ಆನ್‌ಲೈನ್‌ನಲ್ಲಿ http://kreis.kar.nic.in ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ 100 ಅಂಕಗಳ ಪ್ರವೇಶ ಪರೀಕ್ಷೆಯನ್ನು 2024ರ ಫೆಬ್ರವರಿ 18ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ವಿಜಯನಗರ ಜಿಲ್ಲಾ ವಸತಿ ಶಿಕ್ಷಣ ಸಂಸ್ಥೆಗಳ ಜಿಲ್ಲಾ ಸಮನ್ವಯಾಧಿಕಾರಿ ಶಾಂತಾಭಾಯಿ ಕೆ. ಹುಲ್ಯಾಳ್ ದೂರವಾಣಿ ಸಂಖ್ಯೆ 97414 54101, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಹೆಚ್.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.