ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಹೈದರಾಬಾದ್ ಮೂಲದ ಚಂದ್ರಮೋಹನ್ ಎಂದು ಗುರುತಿಸಲಾಗಿದೆ.
ಪ್ರಕರಣದಲ್ಲಿ ಸತ್ಯನಾರಾಯಣ ವರ್ಮ ಎಂಬಾತ ಬಂಧನವಾಗಿತ್ತು. ಬಳಿ 10 ಕೋಟಿ ನಗದು, 16 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿತ್ತು. ಸತ್ಯನಾರಾಯಣ ವರ್ಮ ಜೊತೆ ಕೈಜೋಡಿಸಿದ್ದ ಆರೋಪದ ಮೇಲೆ ಈಗ ಚಂದ್ರಮೋಹನ್‌ನನ್ನು ಬಂಧಿಸಲಾಗಿದೆ. ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಬಂಧಿತ ಆರೋಪಿಗಳಾದ ಸತ್ಯನಾರಾಯಣ ವರ್ಮ ಹಾಗೂ ಚಂದ್ರಮೋಹನ್ ಇಬ್ಬರನ್ನೂ 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ಹಣ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಈಗಾಗಲೇ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.