ದಾವಣಗೆರೆ: ದಾವಣಗೆರೆ ಜಿಲ್ಲೆಯ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಮಕ್ಕಳಿದ್ದಾರೆ ಎಂಬ ಆರೋಪ ಕೇಳಿ ಬಂದಿರುವುದಕ್ಕೆ ಸ್ಪಷ್ಟನೆ ಕೊಟ್ಟಿದ್ದು ಹೀಗೆ.!
ನಮಗೆ ಮದುವೆಯೂ ಆಗಿಲ್ಲ, ಮಕ್ಕಳೂ ಇಲ್ಲ. ಈ ಕುರಿತ ಸಂಶಯ ನಿವಾರಣೆಗಾಗಿ ಡಿಎನ್ಎ ಪರೀಕ್ಷೆಗೆ ಒಳಪಡಲೂ ಸಿದ್ಧ ಎಂದು ತಿಳಿಸಿದ್ದಾರೆ.
ಆರೋಪ ಮಾಡಿದವರು ಮಕ್ಕಳನ್ನು ಕರೆತಂದು ಪರೀಕ್ಷೆಗೆ ಒಳಪಡಿಸಲಿ ಎಂದು ಸವಾಲ್ ಹಾಕಿದ್ದಾರೆ. ಅಲ್ಲದೇ, ತಪ್ಪು ಮಾಡಿದ ದಾಖಲೆ ನೀಡಿದರೆ ಭಕ್ತರೇ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಿದ್ದಾರೆ.