ಬೆಂಗಳೂರು : ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಿ ಮಾಜಿ ಸಚಿವ ನಾಗೇಂದ್ರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ.
ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಇಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ ಎಂದು ಇಡಿ ಉಲ್ಲೇಖಿಸಿದೆ.ಇ
ಹೈದರಾಬಾದ್‌ನಲ್ಲಿದ್ದ ಮಧ್ಯವರ್ತಿ ಸತ್ಯನಾರಾಯಣ ವರ್ಮಾ ಜೊತೆ ನಾಗೇಂದ್ರಗೆ ನಿಕಟ ಸಂಪರ್ಕ ಇತ್ತು. ನಾಗೇಂದ್ರನ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.