‘ವಾಲ್ಮೀಕಿ ನಿಗಮ ಹಗರಣಕ್ಕೆ ಅಂತ್ಯಾನೇ ಇಲ್ಲ ಅನಿಸುತ್ತಿದೆ’- ಬೊಮ್ಮಾಯಿ

WhatsApp
Telegram
Facebook
Twitter
LinkedIn

ನವದೆಹಲಿ: ವಾಲ್ಮೀಕಿ ನಿಗಮದ ಹಗರಣದ ಆಳ ಮತ್ತು ಅಗಲ ನೋಡಿದರೆ ಹೊಸ ತಿರುವುಗಳಿಗೆ ಕಾರಣವಾಗುತ್ತಿದೆ. ಇದಕ್ಕೆ ಅಂತ್ಯಾನೇ ಇಲ್ಲ ಅಂತ ಅನಿಸುತ್ತದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮಕ್ಕೆ ಸಂಬಂಧಿಸಿದ ಸುಮಾರು 40 ಕೋಟಿ ರೂ. ಹಣ ನೇರವಾಗಿ ರಾಜ್ಯ ಸರ್ಕಾರದ ಖಜಾನೆಯಿಂದ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟೀಕರಣ ನೀಡಬೇಕು ಎಂದರು.

ಈಗಾಗಲೇ ಹಲವಾರು ಅಕೌಂಟ್‌ಗಳನ್ನು ತೆರೆದು ಹೈದರಾಬಾದ್‌ಗೆ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಆದರೆ, ಅದು ಹಣಕಾಸು ಇಲಾಖೆಗೆ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾರ್ಚ್ 31 ರಂದು ನೇರವಾಗಿಯೇ ರಾಜ್ಯ ಸರ್ಕಾರದ ಖಜಾನೆಯಿಂದ ಸುಮಾರು 40 ಕೋಟಿ ರೂ. ಅಧಿಕೃತ ಖಾತೆಗೆ ಹೋಗದೇ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿದೆ ಎಂಬ ಮಾಹಿತಿ ಇದೆ. ಇದು ಹೇಗೆ ಹೊರಗೆ ಬಂದಿದೆ ಎಂದರೆ, ಪೇಮೆಂಟ್ ಮಾಡಿರುವ ಚಲನ್ ಅನು ಕಂಪ್ಯೂಟರ್‌ನಿಂದ ತೆಗೆದು ಹಾಕುವ ಪಯತ್ನವಾಗಿದೆ. ಈ ಹಿನ್ನೆಲೆ ಖಜಾನೆಯಲ್ಲಿ ಸ್ವಲ್ಪ ಗಲಿಬಿಲಿಯಾಗಿದೆ. ಹೀಗಾಗಿ ಈ ವಿಷಯ ಹೊರಗೆ ಬಂದಿದೆ. ಸಿಎಂ ಈ ಬಗ್ಗೆ ವಿಧಾನಸಭೆಯಲ್ಲಿ ಸ್ಪಷ್ಟೀಕರಣ ನೀಡಬೇಕು ಆಗ್ರಹಿಸಿದ್ದಾರೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon