ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ನನ್ನು ಬಂಧಿಸಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ಪಿಎ ಹರೀಶ್‌ನನ್ನು ಇಂದು ಬೆಳ್ಳಂ ಬೆಳಗ್ಗೆ ಬಂಧಿಸಿ ಶಾಂತಿನಗರದ ಇಡಿ ಕಚೇರಿಗೆ ಕರೆತಂದಿದ್ದಾರೆ.
ಅಕ್ರಮವಾಗಿ ಹಣ ಸಾಗಾಟದಲ್ಲಿ ಪಿಎ ಹರೀಶ್ ಪಾತ್ರ ವಹಿಸಿರುವುದು ಇಡಿ ತನಿಖೆಯಿಂದ ದೃಢಪಟ್ಟಿದೆ. ಸಚಿವರ ಪರವಾಗಿ ಪಿಎ ಡೀಲ್ ನಡೆಸಿರುವುದು ಬೆಳಕಿಗೆ ಬಂದ ಹಿನ್ನೆಲೆ ಆತನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ್ದರು. ದಾಳಿ ನಡೆಸಿದ ಅಧಿಕಾರಿಗಳು ನಾಗೇಂದ್ರ ಅವರಿಗೆ ಸಂಬ0ಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಿದರು.