ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರು ನವೆಂಬರ್.20ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಲಾಗಿದೆ.
ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಗಿತ್ತು ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ನ್ಯಾಯಪೀಠವನ್ನು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದ್ದರು. ಮನವಿ ಪರಿಗಣಿಸಿದಂತ ನ್ಯಾಯಾಲಯವು ವಿಚಾರಣೆ ಮುಂದೂಡಿಕೆ ಮಾಡಿದೆ. ಈ ಹಿನ್ನಲೆಯಲ್ಲಿ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್.20, 2024ರವರೆಗೆ ಅವಧಿ ವಿಸ್ತರಿಸಿದೆ. ಈ ಮೂಲಕ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ನಿಂದ ಮುಕ್ತಿ ಸಿಕ್ಕಂತೆ ಆಗಿದೆ.
2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬಹುದು. https://transport.karnataka.gov.in/english ಆನ್ಲೈನ್ ಮೂಲಕವೂ ನೋಂದಣಿಗೆ ಅವಕಾಶ ನೀಡಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ