ನೀವು ಸ್ವಂತಃ ವಾಹನ ಖರೀದಿ ಮಾಡಬೇಕೆ? ಕರ್ನಾಟಕ ಸರ್ಕಾರ ನೀಡುವ 4 ಲಕ್ಷ ರೂ. ಸಬ್ಸಿಡಿ ಪಡೆಯಬೇಕೇ? ಸ್ವಾವಲಂಬಿ ಸಾರಥಿ ಯೋಜನೆಯ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಈ ಯೋಜನೆಯ ಬಗ್ಗೆ ಮಾಹಿತಿ ಪಡೆದು ಚಾಲಕ ವೃತ್ತಿಯಿಂದ ಉದ್ಯಮ ಆರಂಭಿಸಿ.
ಸ್ವಾವಲಂಬಿ ಸಾರಥಿ ಯೋಜನೆಯ ಬಗ್ಗೆ ದೇಶದಾದ್ಯಂತ ಇಗಾಗಲೇ ಚರ್ಚೆ ನಡೆಯುತ್ತಿದೆ. ರಾಜ್ಯ ಸರ್ಕಾರದ ವಿವಿಧ ನಿಗಮಗಳ ಮೂಲಕ ವಿವಿಧ ಸಮೂದಾಯಗಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಲಾಗಿರುತ್ತದೆ. ಅದರಂತೆ ಸ್ವಾವಲಂಬಿ ಸಾರಥಿ ಯೋಜನೆಯು ಅದರಲ್ಲಿ ಒಂದು.
ಮಾಹಿತಿ:
ಯೋಜನೆಯ ಹೆಸರು: ಸ್ವಾವಲಂಬಿ ಸಾರಥಿ ಯೋಜನೆ
ಸಹಾಯಧನ ಮೊತ್ತ: ವಾಹನದ ಮೌಲ್ಯದ ಶೇ 75 ರಷ್ಟು ಅಥವಾ ಗರಿಷ್ಠ ರೂ. 4 ಲಕ್ಷದ ವರೆಗೆ
ಅರ್ಜಿದಾರರ ವಯಸ್ಸು: 18 ರಿಂದ 56 ವರ್ಷ
ಸ್ವಾವಲಂಬಿ ಸಾರಥಿ: ಸರಕು ವಾಹನ/ಬ್ಯಾಕ್ಸಿ ಹಳದಿ ಬೋರ್ಡ್ ವಾಹನದ ವೆಚ್ಚದ ಶೇ.75 ರಷ್ಟು ಸಹಾಯಧನ ಗರಿಷ್ಟ ರೂ.4 ಲಕ್ಷ
ಬೇಕಾಗುವ ದಾಖಲೆಗಳು:
ಜಾತಿ ಪ್ರಮಾಣಪತ್ರ (Caste Certificate)
ಆದಾಯ ಪ್ರಮಾಣಪತ್ರ (Income Certificate)
ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
ವಾಹನ ಚಾಲನಾ ಪರವಾನಗಿ (Driving Licence) ಪ್ರತಿ
ಬ್ಯಾಂಕ್ ಪಾಸ್ ಬುಕ್ ಪ್ರತಿ
ವಾಹನದ ಅಂದಾಜು ದರಪಟ್ಟಿ
ಸ್ವಯಂ ಘೋಷಣೆ ಪತ್ರ
ಫಲಾನುಭವಿಯ ಇತ್ತೀಚಿನ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿದಾರರ ಮತ್ತು ಕುಟುಂಬದ ಸದಸ್ಯರು ವಾಹನ ಖರೀದಿಗೆ ರಾಜ್ಯ ಸರ್ಕಾರದ ಯಾವುದೇ ಯೋಜನೆಯಡಿ ಸಾಲ ಸೌಲಭ್ಯ ಪಡೆದಿಲ್ಲದಿರುವ ಬಗ್ಗೆ ಜಿಲ್ಲಾ ವ್ಯವಸ್ಥಾಪಕರಿಂದ ದೃಢೀಕರಣ ಪತ್ರ
ಈ ಯೋಜನೆಯಡಿ ಪಡೆದ ವಾಹನವನ್ನು ಯಾರಿಗೂ ಪರಭಾರೆ ಮಾಡದಿರುವ ಬಗ್ಗೆ ದೃಢೀಕರಣ ಪತ್ರ
ಷರತ್ತುಗಳು
ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಅರ್ಜಿದಾರರು 21 ವರ್ಷದಿಂದ 56 ವರ್ಷದಯೊಳಗಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ರೂ.1,50,೦೦೦/-ಗ್ರಾಮೀಣ ಹಾಗೂ ರೂ.2,೦೦,೦೦೦/- ನಗರ ಪ್ರದೇಶದವರಿಗೆ ಮಿತಿಯೊಳಗಿರಬೇಕು.
ಅರ್ಜಿದಾರರು ಘಟಕವನ್ನು ಸ್ಥಾಪಿಸಲು ಅವಶ್ಯವಿರುವ ಸ್ಥಳಾವಕಾಶವನ್ನು ಹೊಂದಿರಬೇಕು.
ವಾಹನದ ಉದ್ದೇಶವಾದಲ್ಲಿ ವಾಹನ ಚಾಲನ ಪರವಾನಗಿ ಹೊಂದಿರತಕ್ಕದ್ದು.
ಯಾರು ಅರ್ಜಿ ಸಲ್ಲಿಸಬಹುದು?ಯೋಜನೆಗೆ ಈ ಕೆಳಗಿನ ನಿಗಮಗಳ ವ್ಯಾಪ್ತಿಯಲ್ಲಿ ಬರುವ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗದು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ
ಅರ್ಜಿ ಸಲ್ಲಿಸುವುದು ಹೇಗೆ?ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೇವಾ ಸಿಂಧು ಪೊರ್ಟಲ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆ ಲಿಂಕ್ನ್ನು ಕೇಳಗೆ ನೀಡಲಾಗಿದೆ.
2025-2026 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
Car Loan Subsidy For SC/ST ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಕೆ ಆರಂಭ: 07-08-2025ಯೋಜನೆಗೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-09-2025
ಆನ್ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿಅಧಿಕೃತ ವೆಬ್ಸೈಟ್: sevasindhu.karnataka.gov.in
2023-24 ಮತ್ತು 2024-25 ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ವಿಷೇಶ ಸೂಚನೆಗಳು:
ನಿಗಮದ ನಿರ್ದೇಶಕ ಮಂಡಳಿ ವಿವೇಚನಾ ಕೋಟಾ ಅಥವಾ ಸರ್ಕಾರದ ಸಾಂಸ್ಥಿಕ ಕೋಟಾದಡಿ ಸ್ವೀಕರಿಸುವ ಅರ್ಜಿಗಳನ್ನು ಸಹ ಸೇವಾಸಿಂಧು ಪೊರ್ಟಲ್ ಮೂಲಕವೇ ಸಲ್ಲಿಸುವುದು.
ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
ಫಲಾಪೇಕ್ಷಿಗಳು ‘ಗ್ರಾಮ ಒನ್ʼ, ʼಬೆಂಗಳೂರು ಒನ್ʼ, ʼಕರ್ನಾಟಕ ಒನ್ʼ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಛೇರಿ ಅಥವಾ ನಿಗಮಗಳ ವೆಬ್ ಸೈಟ್ ಅಥವಾ ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ 9482-300-400 ಗೆ ಸಂಪರ್ಕಿಸಬಹುದು.