ವಿಕಲಚೇತನರು ಸದಾ ಉತ್ಸಾಹಿಗಳಾಗಿರಬೇಕು: ಪಿ.ಎನ್ ಲೋಕೇಶ್

WhatsApp
Telegram
Facebook
Twitter
LinkedIn

 

      ದಾವಣಗೆರೆ, : ವಿಕಲಚೇತನರು ಸದಾ ಉತ್ಸಾಹಿಗಳಾಗಿರಬೇಕು ಮತ್ತು  ಎಲ್ಲಾ ಕ್ಷೇತ್ರಗಳಲ್ಲಿಯೂ ಭಾಗವಹಿಸಿ ಸಾಧನೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದರು.

ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜರುಗಿದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಕಲಚೇತನರ ದಿನಾಚರಣೆಗೆ ವಿಶ್ವಸಂಸ್ಥೆಯು ವಿಕಲಚೇತನರಿಗಾಗಿ, ವಿಕಲಚೇತನರೊಂದಿಗೆ, ವಿಕಲಚೇತನರಿಂದ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಂರಕ್ಷಿಸಲು ಮತ್ತು ಸಾಧಿಸಲು ಕಾರ್ಯಪ್ರವೃತ್ತವಾಗುವಿಕೆಯಲ್ಲಿ ಒಗ್ಗಟ್ಟು ಎಂಬ ಘೋಷ ವಾಕ್ಯವನ್ನು ನೀಡಿದ್ದು, ವಿಕಲಚೇತನರನ್ನು ಸಮಾಜದ ಮುಖ್ಯವಾಹಿಗೆ ತರುವ ಕುರಿತು ಜಾಗೃತಿ, ಸಮಾನ ಅವಕಾಶ ಹಾಗೂ ಸೌಲಭ್ಯ ಕಲ್ಪಿಸುವುದು ಈ ದಿನದ ಉದ್ದೇಶವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್ ಮಾತನಾಡಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ಮಾತು ನಿಜ ಆಗಬೇಕಾದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿಕಲಚೇತನರ ಕಾಯ್ದೆಗಳನ್ನು ಸಮರ್ಪಕವಾಗಿ ಅನುμÁ್ಠನ ಮಾಡಿದಾಗ ಮಾತ್ರ ಸಾಧ್ಯ.

ಜಿಲ್ಲೆಯಲ್ಲಿರುವ ವಿ.ಆರ್.ಡಬ್ಲ್ಯೂ ಮತ್ತು ಎಮ್.ಆರ್.ಡಬ್ಲ್ಯೂ ಹಾಗೂ ಸಂಘ ಸಂಸ್ಥೆಗಳು ಅತ್ಯಂತ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತದಾನದ ಜಾಗೃತಿ ಮೂಡಿಸುವಲ್ಲಿ ವಿಕಲಚೇತನರು ಬಹಳ ಮುಂಚೂಣಿಯಲ್ಲಿದ್ದು,  ಕರ್ನಾಟಕದಲ್ಲಿಯೇ ಅತಿಹೆಚ್ಚು ವಿಕಲಚೇತನರು ಮತದಾನ ಮಾಡಿದ ಜಿಲ್ಲೆ ನಮ್ಮದಾಗಿರುವುದು ಹೆಮ್ಮೆಯ ವಿಷಯವಾಗಿದೆ.

ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿಯಲ್ಲಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವ ನಿಟ್ಟಿನಲ್ಲಿ  62 ವಿಕಲಚೇತನರ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಿದ್ದು, ಪ್ರಥಮ ಹಂತದಲ್ಲಿ  ಅವರಿಗೆ ಉದ್ಯೋಗ ಸೃಷ್ಠಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾ ಇಲಾಖೆಯ ಅಧಿಕಾರಿ ಡಾ.ಕೆ.ಕೆ ಪ್ರಕಾಶ್ ಜಿಲ್ಲೆಯಲ್ಲಿ ಸುಮಾರು 24,996 ವಿಕಲಚೇತನರಿದ್ದಾರೆ. ನವೆಂಬರ್ 2023ರ ಅಂತ್ಯಕ್ಕೆ 9,144 ವಿಕಲಚೇತನರು ತಲಾ ರೂ.800 ಗಳು, À ಶೇ.75 ರಷ್ಡು ಅಂಗವೈಕಲ್ಯತೆಯನ್ನು ಹೊಂದಿರುವ ವಿಕಲಚೇತನರು 16,159 ತಲಾ ರೂ.1,400 ಗಳು ಹಾಗೂ ಬುದ್ಧಿಮಾಂದ್ಯ ಮತ್ತು ಮಾನಸಿಕ ಅಸ್ವಸ್ಥರಾದ 4,118 ವಿಕಲಚೇತನರು ತಲಾ ರೂ.2,000 ಗಳಂತೆ  ಜಿಲ್ಲೆಯಲ್ಲಿ ಒಟ್ಟು 29,421 ವಿಕಲಚೇತನರು ಖಜಾನೆ ಮೂಲಕ ಮಾಸಾಶನವನ್ನು ಪಡೆಯುತ್ತಿದ್ದಾರೆ.

ಅಲ್ಲದೆ ವಿದ್ಯಾರ್ಥಿ ವೇತನ ಯೋಜನೆ, ಶಿಶುಕೇಂದ್ರಿತ ಯೋಜನೆ, ದ್ವಿಚಕ್ರ ವಾಹನ ಯೋಜನೆ, ವಿವಾಹ ಪೆÇ್ರೀತ್ಸಾಹ ಧನ, ದೃಷ್ಟಿ ದೋಷವುಳ್ಳವರಿಗೆ ಟಾಕಿಂಗ್ ಲ್ಯಾಪ್ ಟಾಪ್, ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ, ಬ್ರೈಲ್ ಕಿಟ್ ಯೋಜನೆ, ಸಾಧನ ಸಲಕರಣೆ  ಯೋಜನೆಗಳ ಮೂಲಕ ವಿಕಲಚೇತನರಿಗೆ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಪುಸ್ತಕ ಬಿಡುಗಡೆ: ದಾವಣಗೆರೆ ಪಬ್ಲಿಕ್ ವಾಯ್ಸ್ ವರದಿಗಾರರಾದ ಮಹಂತೇಶ್ ಬ್ರಹ್ಮ ರಚಿಸಿರುವ ವಿಕಲಚೇತನರ ಹಕ್ಕುಗಳು ಮತ್ತು ಸರ್ಕಾರಿ ಸೌಲಭ್ಯಗಳು ಎಂಬ ಪುಸ್ತಕ ಬಿಡುಗಡೆಗೊಳಿಸಲಾಯಿತು.

ಪ್ರಶಸ್ತಿ ಪ್ರಧಾನ: ಪ್ರಸಕ್ತ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ನಡೆಸಲಾದ ಕ್ರೀಡಾ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಸಾಧನೆ ಮಾಡಿದವರಿಗೆ ಸನ್ಮಿಸಲಾಯಿತು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್.ಜಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀಬಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಸಂಕಲ್ಪ ಸಂಸ್ಥೆಯ ಅಧ್ಯಕ್ಷ ಸುರೇಶ್ ಉಪಸ್ಥಿತರಿದ್ದರು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon