ದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್ 2024-25 ಅನ್ನು ಮಂಡಿಸಿದ್ದು, ಇದು ಕಾಂಗ್ರೆಸ್ ಪ್ರಣಾಳಿಕೆ ಎಂದು ಕಾಂಗ್ರೆಸ್ ಪಕ್ಷದ ನಾಯಕರು ಟೀಕಿಸಿದ್ದಾರೆ.
ಮಾಜಿ ಕೇಂದ್ರ ಹಣಕಾಸು ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಡಿದ ಪೋಸ್ಟ್ ನಲ್ಲಿ ಲೋಕಸಭಾ ಚುನಾವಣಾ ಫಲಿತಾಂಶಗಳ ನಂತರ ಮಾನ್ಯ ವಿತ್ತ ಸಚಿವೆ, ಕಾಂಗ್ರೆಸ್ ಪ್ರಣಾಳಿಕೆಯನ್ನು ಓದಿದ್ದಾರೆ ಎಂದು ತಿಳಿದು ನನಗೆ ಸಂತೋಷವಾಗಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿತ್ತ ಸಚಿವೆ ಇತರ ಕೆಲವು ವಿಚಾರಗಳನ್ನು ನಕಲು ಮಾಡಬೇಕಿತ್ತು ಎಂದು ನಾನು ಬಯಸುತ್ತೇನೆ. ಅವರಿಗೆ ಬಿಟ್ಟು ಹೋಗಿರುವುದನ್ನು ಅವಕಾಶಗಳನ್ನು ನಾನು ಶೀಘ್ರದಲ್ಲೇ ಪಟ್ಟಿ ಮಾಡುತ್ತೇನೆ ಎಂದು ಚಿದಂಬರಂ ಹೇಳಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರ ಕೊನೆಗೂ ಸಾಮೂಹಿಕ ನಿರುದ್ಯೋಗ ರಾಷ್ಟ್ರೀಯ ಬಿಕ್ಕಟ್ಟು ಎಂದು ಒಪ್ಪಿಕೊಳ್ಳುವುದು ತುರ್ತು ಗಮನದ ಅಗತ್ಯವಿದೆ ಇದು ತುಂಬಾ ತಡವಾಗಿದೆ ಎಂದಿದ್ದಾರೆ.ಈ ಬಜೆಟ್ ಹೆಚ್ಚು ಕಡಿಮೆ ಕಾಂಗ್ರೆಸ್ ಪ್ರಣಾಳಿಕೆಯನ್ನು ನಕಲು ಮಾಡಿದೆ. ಪ್ರಮುಖ ವಿಷಯವೆಂದರೆ ಯುವ ನಿಧಿ ಯೋಜನೆ ಬಗ್ಗೆ ಈ ಸರ್ಕಾರವು ಅಪ್ರೆಸೆಂಟಿಶಿಪ್ ಯುವಕರಿಗೆ ₹ 5000 ಘೋಷಿಸಿದೆ. ಈ ಸರ್ಕಾರವು ರಾಹುಲ್ ಗಾಂಧಿಯವರ ಆಲೋಚನೆಗಳನ್ನು ನಕಲು ಮಾಡಿದೆ ಎಂದು ತೋರಿಸುತ್ತದೆ. ಆಂಧ್ರಪ್ರದೇಶಕ್ಕೆ ಲಾಲಿಪಾಪ್ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಭಾಷಣವನ್ನು ‘ಕುರ್ಸಿ ಬಚಾವೋ ಬಜೆಟ್ ಎಂದು ಟೀಕಿಸಿದ್ದಾರೆ.