ಚಿತ್ರದುರ್ಗ: 2024-25ನೇ ಶೈಕ್ಷಣಿಕ ಸಾಲಿಗೆ ಹೊಸದುರ್ಗ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಜೂನ್ 30ರೊಳಗೆ ಆನ್‍ಲೈನ್ (sw.kar.nic.in) ಹಾಗೂ ಮ್ಯಾನ್ಯುಯಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.