ಚಿತ್ರದುರ್ಗ: 2024-25ನೇ ಸಾಲಿಗೆ ರಾಷ್ಟಿçÃಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ (ಎನ್.ಎಸ್.ಪಿ ಪೋರ್ಟಲ್) ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ತಾವುಗಳು ವ್ಯಾಸಂಗ ಮಾಡುತ್ತಿರುವ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳ ಮುಖಾಂತರ ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿ ವೇತನಕ್ಕೆ ವೆಬ್‌ಸೈಟ್ www.scholarships.gov.in ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ ಅರ್ಜಿಯ ಒಂದು ಪ್ರತಿಯನ್ನು ಆಯಾ ತಾಲ್ಲೂಕು ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಅಥವಾ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
ಮಾಹಿತಿಗಾಗಿ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.