ದಾವಣಗೆರೆ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ, ಪದವಿ ಮತ್ತು ಸಂಯೋಜಿತ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳು https://ssp.postmatric.karnataka.gov.in ಮೂಲಕ ಆನ್‍ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ವೆಬ್‍ಸೈಟ್‍ನ್ನು ನೋಡಬಹುದು. ಹಾಗೂ 8050770005, ಇ-ಮೇಲ್ ವಿಳಾಸ [email protected], 1902 ಸಂಖ್ಯೆಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.
“ ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.”