ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುತ್ತಿರುವ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಗಳಾದ ಡಾ.ಯತೀಂದ್ರ ಸಿದ್ದರಾಮಯ್ಯ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜು, ಬಿಲ್ಕಿಸ್ ಬಾನು, ಐವಾನ್ ಡಿಸೋಜಾ, ವಸಂತ ಕುಮಾರ್, ಜಗದೇವ್ ಗುತ್ತೇದಾರ್ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್, ವಿಧಾನಸೌಧದಲ್ಲಿ ಬಿ ಫಾರಂ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕ ಅಶೋಕ್ ಪಟ್ಟಣ, ಹಿರಿಯ ಮುಖಂಡರಾದ ಹಂಪನಗೌಡ ಬಾದರ್ಲಿ ಮತ್ತಿತರರು ಇದ್ದರು.
