ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಮೂರು ಜನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಸುಮಲತಾ ಅಂಬರೀಶ್ ಅವರಿಗೆ ನಿರಾಸೆ ಉಂಟಾಗಿದೆ. ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆಯೇ (ಜೂನ್ 03) ಕೊನೆ ದಿನವಾಗಿದೆ. ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದೆ.
