ಚಿತ್ರದುರ್ಗ : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎನ್.ಡಿ.ಕುಮಾರ್ ನೇತೃತ್ವದಲ್ಲಿ ಚಿತ್ರದುರ್ಗ ನಗರ ಠಾಣೆಯಲ್ಲಿ ದೂರನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಎನ್.ಡಿ,ಕುಮಾರ್ ವಿಧಾನ ಪರಿಷತ್ ಸಿ.ಟಿ.ರವಿ ಅವರು ಕಾರ್ಯ ನಿಮಿತ್ತ ಅ. 27ರಂದು ಚಿಕ್ಕಮಗಳೂರು ಗ್ರಾಮಾಂತರದಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದ್ದು, ಅಲ್ಲಿನ ಅಧಿಕಾರಿಗಳನ್ನು ವಿಚಾರಿಸುವ ಮೊಬೈಲ್ನಲ್ಲಿ ಮಾತನಾಡುವ ಸಂದರ್ಭದಲ್ಲಿ ಸವಿತ ಸಮಾಜದ ನಿಷೇಧಿತ ಪದ(ಹಜಾಮ)ವನ್ನು ಬಳಸಿದ್ದಾರೆ. ಈ ರೀತಿ ಅಸಂವಿಧಾನಿಕ ಪದಗಳನ್ನು ಬಳಸಿ ನಮ್ಮ ಜಾತಿಯ ವೃತ್ತಿ ಧರ್ಮಕ್ಕೆ ಅವಮಾನ ಮಾಡಿ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುತ್ತಾರೆ ಇದರಿಂದ ಕರ್ನಾಟಕ ರಾಜ್ಯ ಸವಿತಾ ಸಮಾಜಕ್ಕೆ ತೀವ್ರ ನೋವುಂಟಾಗಿದೆ ಆದ್ದರಿಂದ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಹಾಗೂ ಕಾನೂನಿನಡಿ ಅವರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.
ಈ ಸಮಯದಲ್ಲಿ ಗ್ಯಾರೆಂಟಿ ಜಿಲ್ಲಾಧ್ಯಕ್ಷರಾದ ಶಿವಣ್ಣ ಗಂಜಿಗಟ್ಟೆ, ತಾಲ್ಲೂಕು ಸವಿತಾ ಸಮಾಜದ ಅಧ್ಯಕ್ಷರಾದ ಆರ್.ಶ್ರೀನಿವಾಸ್, ಅನಿಲ್ ಕುಮಾರ್, ಪರಮೇಶ್ವರಪ್ಪ, ಡಿ.ಎನ್.ಮೈಲಾರಪ್ಪ, ಸೇರಿದಂತೆ ಇತರರು ಉಪಸ್ಥಿತರಿದ್ದರು.
































