ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತು ವಿಪಕ್ಷ ಸ್ಥಾನದಲ್ಲಿ ಕುಳಿತಿರುವ ಭಾರತೀಯ ಜನತಾ ಪಾರ್ಟಿ ಇನ್ನು ಕೂಡ ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದಕ್ಕೆ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಬಹಳ ವಿಭಿನ್ನ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.
ವಿಪಕ್ಷ ನಾಯಕನಿಲ್ಲದೆ ವಿಧಾನಸಭೆ ಅಪೂರ್ಣ ಎನಿಸುತ್ತಿದೆ ನಿಮಗೆ ಆಯ್ಕೆ ತೀರಾ ಕಷ್ಟವಾದಲ್ಲಿ ಕಾಂಗ್ರೆಸ್‌ನಲ್ಲೇ ಸೂಕ್ತವಾದ ಒಬ್ಬರನ್ನು ಹುಡುಕಿ ವಿಪಕ್ಷ ನಾಯಕನ ಹುದ್ದೆಯನ್ನು ಹೊರಗುತ್ತಿದೆ ನೀಡಿ ಎಂದು ಸಲಹೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬಿಜೆಪಿಗೆ ಒಂದು ವಿನಮ್ರ ಸಲಹೆ. ವಿಪಕ್ಷ ನಾಯಕನಿಲ್ಲದೆ ವಿಧಾನ ಸಭೆ ಅಪೂರ್ಣ ಎನಿಸುತ್ತಿದೆ. ನಿಮಗೆ ಆಯ್ಕೆ ತೀರಾ ಕಷ್ಟವಾದಲ್ಲಿ ಕಾಂಗ್ರೆಸ್ ನಲ್ಲೇ ಸೂಕ್ತರಾದ ಒಬ್ಬರನ್ನು ಹುಡುಕಿ ವಿಪಕ್ಷ ನಾಯಕನ ಹುದ್ದೆಯನ್ನು ‘ಔಟ್ ಸೋರ್ಸ್’ ಮಾಡಿ! ಎಂದು ಬರೆದು ಹಂಚಿಕೊಂಡಿದ್ದಾರೆ.
ಇದಕ್ಕೆ ನೆಟ್ಟಿಗರಿಂದ ವಿಭಿನ್ನ ರೀತಿಯ ಕಮೆಂಟ್‌ಗಳ ಸುರಿಮಳೆ ಬರುತ್ತಿದೆ.