ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ನಡೆಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳು ಶಾಕ್ ಗೆ ಒಳಗಾಗಿದ್ದಾರೆ. ಯಾಕೆಂದರೆ, ಪ್ರಯಾಣಿಕನೊಬ್ಬನ ಬ್ಯಾಗ್ ನಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 10 ಅನಕೊಂಡಾ ಪತ್ತೆಯಾಗಿವೆ. ಆತ ಬ್ಯಾಂಕಾಕ್ನಿಂದ ಅಕ್ರಮವಾಗಿ 10 ಅನಕೊಂಡಾ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಬ್ಯಾಂಕಾಕ್ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್ಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.
ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡಾ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.