ಬಾಗಲಕೋಟೆ: ಮುಂದಿನ ವರ್ಷ ಕರ್ನಾಟಕದ ಜನತೆಯ ಜೇಬಿಗೆ 58 ಸಾವಿರ ಕೋಟಿ ರೂಪಾಯಿಯನ್ನು ಹಾಕುತ್ತೇವೆ. ವಿರೋಧಿಗಳ ಟೀಕೆಗೆ ಡೋಂಟ್ ಕೇರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಡವರಿಗೆ ಜಾತಿ-ಧರ್ಮ ಎನ್ನುವುದು ಇಲ್ಲ. ಎಲ್ಲಾ ಜಾತಿ ಧರ್ಮದ ಬಡವರ, ಮಧ್ಯಮವರ್ಗದವರ ಸಂಕಟಗಳೂ ಒಂದೇ ಆಗಿವೆ. ಹೀಗಾಗಿ ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮವರ್ಗದವರ ಸಂಕಷ್ಟಕ್ಕೆ ಸ್ಪಂದಿಸಲು ನಾವು ಗ್ಯಾರಂಟಿ ಯೋಜನೆಗಳ ಮೂಲಕ ಈ ವರ್ಷ 38 ಸಾವಿರ ಕೋಟಿ ರೂಪಾಯಿಯನ್ನು ಕನ್ನಡ ಜನತೆಯ ಜೇಬಿಗೆ ಹಾಕುವ ಕೆಲಸ ಮಾಡಿದ್ದೇವೆ. ಎಂದರು.
ಇನ್ನು ಬಾಗಲಕೋಟೆಯ ವೀಣಾ ವಿ ಕಾಶಪ್ಪನವರ್ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಕೆ.ಎ.ಎಸ್ ಮತ್ತು ಪಿ.ಎಸ್.ಐ ಪರೀಕ್ಷೆಯ ತರಬೇತಿ ಕೇಂದ್ರ ಮತ್ತು ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಮಕ್ಕಳೂ ಕೆಎಎಸ್-ಪಿಎಸ್ಐ ಪರೀಕ್ಷೆಯಲ್ಲಿ ಪಾಸಾಗಲು ವೀಣಾ ಕಾಶಪ್ಪನವರ್ ಫೌಂಡೇಶನ್ ನೆರವಾಗಲಿದೆ ಎಂದು ಹೇಳಿದ್ದಾರೆ.