ಚಿತ್ರದುರ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನ ಐದು ಫಲಾನುಭವಿ ಆಧಾರಿತ ಯೋಜನೆಗಳಡಿ ವಿವಿಧ ಸೌಲಭ್ಯ ಪಡೆಯಲು ಜಿಲ್ಲೆಯ ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿಗಳನ್ನು ಸೇವಾಸಿಂಧು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನ.
ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್ ಯೋಜನೆ: ಈ ಯೋಜನೆಗೆ ಯುಡಿಐಡಿ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಶಾಲಾ/ಕಾಲೇಜು ದೃಢೀಕರಣ ಪತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಾಸಸ್ಥಳ ಪ್ರಮಾಣ ಪತ್ರ, ಪಡಿತರ ಚೀಟಿ, ಭಾವಚಿತ್ರ, ರೂ.20 ಬಾಂಡ್‍ನಲ್ಲಿ ನೀರಪೇಕ್ಷಣಾ ಪ್ರಮಾಣ ಪತ್ರದ ಅಗತ್ಯವಿದೆ.
ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ: ಯುಡಿಐಡಿ ಕಾರ್ಡ್, ಚಾಲ್ತಿಯಲ್ಲಿರುವ ಎಲ್.ಎಲ್.ಆರ್./ಡಿ.ಎಲ್ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಾಸಸ್ಥಳ ಪ್ರಮಾಣ ಪತ್ರ, ಪಡಿತರ ಚೀಟಿ, ಭಾವಚಿತ್ರ, ರೂ.20 ಬಾಂಡ್‍ನಲ್ಲಿ ನೀರಪೇಕ್ಷಣಾ ಪ್ರಮಾಣ ಪತ್ರ, ಕೆಲಸ/ಶೈಕ್ಷಣಿಕ ಪ್ರಮಾಣ ಪತ್ರದ ಅಗತ್ಯವಿದೆ.
ಸಾಧನೆ ಸಲಕರಣೆ ಯೋಜನೆ: ಯುಡಿಐಡಿ ಕಾರ್ಡ್, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಾಸಸ್ಥಳ ಪ್ರಮಾಣ ಪತ್ರ, ಪಡಿತರ ಚೀಟಿ, ಭಾವಚಿತ್ರ ಹೊಂದಿರಬೇಕು.
ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ: ಯುಡಿಐಡಿ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಶಾಲಾ/ಕಾಲೇಜು ದೃಢೀಕರಣ ಪತ್ರ, ಟೈಲರಿಂಗ್ ತರಬೇತಿ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಾಸಸ್ಥಳ ಪ್ರಮಾಣ ಪತ್ರ, ಪಡಿತರ ಚೀಟಿ, ಭಾವಚಿತ್ರ ಹೊಂದಿರಬೇಕು.
ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ: ಯುಡಿಐಡಿ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಶಾಲಾ/ಕಾಲೇಜು ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಹೊಂದಿರಬೇಕು.
ಮೇಲ್ಕಂಡ ಯೋಜನೆಗಳಿಗೆ ಸೇವಾಸಿಂಧು, ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ವೆಬ್‍ಸೈಟ್ https://sevasindhu.karnataka.gov.in/Sevasindhu/Kannada ಮೂಲಕ ಅರ್ಜಿ ಸಲ್ಲಿಸಿ, ಸ್ವೀಕೃತಿಯೊಂದಿಗೆ ಹಾರ್ಡ್ ಪ್ರತಿಯನ್ನು ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿವಾಗಿ ಎಂಆರ್‍ಡಬ್ಲ್ಯೂ ಚಿತ್ರದುರ್ಗ-9880821934, ಚಳ್ಳಕೆರೆ-9611266930, ಹಿರಿಯೂರು-9902888901, ಹೊಳಲ್ಕೆರೆ-9740030227, ಹೊಸದುರ್ಗ-9741829990, ಮೊಳಕಾಲ್ಮುರು-9742725576 ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235284ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎಂ.ವಿ.ವೀಣಾ ತಿಳಿಸಿದ್ದಾರೆ.