ವಿಶ್ವಕಪ್ 2023ರ: ಭಾರತ-ಆಸ್ಟ್ರೇಲಿಯಾ ನಡುವಿನ ಫೈನಲ್‌ ವೀಕ್ಷಿಸಲಿದ್ದಾರೆ ಮೋದಿ

ಅಹಮದಾಬಾದ್: ಐಸಿಸಿ ವಿಶ್ವಕಪ್ 2023ರ ಫೈನಲ್‌ ಪಂದ್ಯವು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನವೆಂಬರ್ 19ರಂದು ನಡೆಯಲಿದೆ. ಈ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಹಾಜರಾಗುವ ನಿರೀಕ್ಷೆಯಿದೆ.

IAFನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡವು ODI ವಿಶ್ವಕಪ್ 2023ರ ಫೈನಲ್‌ಗೆ ಮುಂಚಿತವಾಗಿ ಏರ್ ಶೋ ನಡೆಸಲಿದೆ. ಸಮಾರೋಪ ಸಮಾರಂಭದಲ್ಲಿ ಹಲವಾರು ಬಾಲಿವುಡ್ ತಾರೆಯರು ಕೂಡ ಪ್ರದರ್ಶನ ನೀಡಲಿದ್ದಾರೆ ಎಂದು ವರದಿಯಾಗಿದೆ. ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1:30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್‌ ಪಂದ್ಯ ವೀಕ್ಷಿಸಲಿದ್ದಾರೆ ಎಂದು ಹೇಳಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement