ಬೆಂಗಳೂರು: 2023-24ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ, ವೀರಶೈವ ಲಿಂಗಾಯತ ಜಾತಿ ಹಾಗೂ ಉಪ ಜಾತಿಗೆ ಸೇರಿದಂತ ಸಮುದಾಯದವರಿಂದ ಶೈಕ್ಷಣಿಕ ಸಾಲ, ಕಾರು ಖರೀದಿ, ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನಿಗಮವು ಮಾಹಿತಿ ನೀಡಿದ್ದು, ಬಸವ ಬೆಳಗು ಯೋಜನೆಯ ಅಡಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ವಾರ್ಷಿಕ ರೂ.3.50 ಲಕ್ಷ ಮಿತಿಯಲ್ಲಿರುವ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳು ಈ ಸಾಲ ಸೌಲಭ್ಯಕ್ಕಾಗಿ ಅರ್ಜಿಯನ್ನು ಸಲ್ಲಿಸುವಂತೆ ತಿಳಿಸಿದೆ.
ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ 28 ವೃತ್ತಿಪರ ಕೋರ್ಸ್ ಗಳಿಗೆ ಸೇರಿರುವಂತ ವೀರಶೈವ ಲಿಂಗಾಯಿತ ಸಮುದಾಯದ ವಿದ್ಯಾರ್ಥಿಗಳಿಗೆ ಬಸವ ಬೆಳಗು ಯೋಜನೆಯ ಅಡಿಯಲ್ಲಿ ಶೇ.2ರ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಈಗಾಗಲೇ ಸಾಲ ಪಡೆದವರು 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವಂತೆ ಹೇಳಿದೆ.
ಇನ್ನೂ ವಿದೇಶ ವಿದ್ಯಾ ವಿಕಾಸ ಯೋಜನೆಯಡಿ ಉನ್ನತ ವ್ಯಾಸಂಗ ಮಾಡುವವರಿಗೆ 10 ಲಕ್ಷದವರೆಗೆ ಸಾಲ ಸೌಲಭ್ಯ, ಜೀವ ಜಲ ಯೋಜನೆಯ ಅಡಿಯಲ್ಲಿ ಕೊಳವೆ ಭಾವಿ ಕೊರೆಸಲು ಗ್ರಾಮಾಂತರ ಪ್ರದೇಶದಲ್ಲಿ 90,000 ಹಾಗೂ ನಗರ ಪ್ರದೇಶದಲ್ಲಿ 1.20 ಲಕ್ಷ ಸೌಲಭ್ಯಕ್ಕೂ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿಭೂತಿ ಘಟಕ, ಖಾನಾವಳಿ ತೆಲೆಯಲು ಸಾಲ ಸೌಲಭ್ಯಕ್ಕೂ ಅರ್ಜಿ ಆಹ್ವಾನಿಸಲಾಗಿದ್ದು, ವಿಭೂತಿ ಘಟಕ ತೆರೆಯಲು ರೂ.3.60 ಲಕ್ಷ, ಖಾನಾವಳಿ ತೆರೆಯಲು 4.60 ಲಕ್ಷ ಸಾಲಸೌಲಭ್ಯ ಹಾಗೂ ಸಹಾಯ ಧನಕ್ಕೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಅರ್ಜಿಯನ್ನು ಆಹ್ವಾನಿಸಿದೆ.
ವೀರಶೈವ ಲಿಂಗಾಯತ ಸಮುದಾಯದವರು ಹಳದಿ ಬೋರ್ಡ್ ಕಾರನ್ನು ಖರೀದಿಸಲು ಸ್ವಾಲಂಭಿ ಸಾರಥಿ ಯೋಜನೆಯ ಅಡಿಯಲ್ಲಿ ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಕೂಡ ನೀಡಲಾಗುತ್ತದೆ. ಈ ಎಲ್ಲಾ ಯೋಜನೆಗೆ ಅರ್ಜಿಯನ್ನು ಆಸಕ್ತ ಸಮುದಾಯದ ಜನರು https://kvldcl.karnataka.gov.in ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22865522, 9900012351ಗೆ ಸಂಪರ್ಕಿಸಿ ಪಡೆಯಬಹುದಾಗಿದೆ.