ದೆಹಲಿ: ಶಬರಿಮಲೆಗೆ ತೆರಳುವ ಅಯ್ಯಪ್ಪ ಸ್ವಾಮಿ ಭಕ್ತರು ವಿಮಾನಗಳಲ್ಲಿ ಇಡುಮುಡಿ ಕಟ್ಟು ತೆಂಗಿನಕಾಯಿ ತೆಗೆದುಕೊಂಡು ಹೋಗಲು ನಾಗರಿಕ ವಿಮಾನಯಾನ ಭದ್ರತಾ ಸಂಸ್ಥೆ(BCAS) ಅನುಮತಿ ನೀಡಿದೆ.!
2025ರ ಜನವರಿ 20ರವರೆಗೆ ವಿಮಾನಗಳಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರು ಇಡುಮುಡಿ ಕಟ್ಟು ತೆಂಗಿನಕಾಯಿ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಸದ್ಯದ ನಿಯಮಾವಳಿಯ ಪ್ರಕಾರ ಕ್ಯಾಬಿನ್ ಬ್ಯಾಗೇಜ್ ನಲ್ಲಿ ತೆಂಗಿನಕಾಯಿ ತೆಗೆದುಕೊಂಡು ಅವಕಾಶವಿಲ್ಲ. ತೆಂಗಿನ ಕಾಯಿ ಹೊತ್ತಿ ಉರಿಯುವ ಗುಣ ಹೊಂದಿರುವುದರಿಂದ ಇದಕ್ಕೆ ನಿರ್ಬಂಧ ವಿಧಿಸಲಾಗಿದೆ.
ವಿಮಾನ ನಿಲ್ದಾಣದಲ್ಲಿ ಎಕ್ಸ್ ರೇ ಮತ್ತು ಸ್ಫೋಟಕ ಪತ್ತೆ ಶೋಧಕದಿಂದ ಪರಿಶೀಲಿಸಿದ ನಂತರ ತೆಂಗಿನಕಾಯಿ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗುವುದು. ನವೆಂಬರ್ ಮಧ್ಯಭಾಗದಿಂದ ಜನವರಿವರೆಗೆ ಶಬರಿಮಲೆ ದೇವಾಲಯ ತೆರೆಯಲಿದ್ದು, ಈ ಅವಧಿಯಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರು ಇಡುಮುಡಿ ಕಟ್ಟು ಸಹಿತ ತೆರಳುತ್ತಾರೆ. ಇದರಲ್ಲಿ ಪೂಜಾ ಸಾಮಗ್ರಿ ಮತ್ತು ತುಪ್ಪ ತುಂಬಿದ ತೆಂಗಿನ ಕಾಯಿ ಇರುತ್ತದೆ. ಇದನ್ನು ತೆಗೆದುಕೊಂಡು ಹೋಗಲು ನಾಗರಿಕ ವಿಮಾನಯಾನ ಭದ್ರತಾ ಸಂಸ್ಥೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಜನವರಿ 20ರವರೆಗೆ ಅನುಮತಿ ನೀಡಿದೆ