ಶಬರಿಮಲೆ : ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೇರಳದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿ ಎಂದು ನಾನು ಅಯ್ಯಪ್ಪ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದಿದ್ದಾರೆ.
ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೇರಳದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಎರಡು ತಿಂಗಳ ಕಾಲ ಶಬರಿಮಲೆ ದೇವರ ದರ್ಶನಕ್ಕೆ ಇನ್ನು ಅವಕಾಶ ಸಿಗಲಿದೆ. ಈ ನಡುವೆ ಉಡುಪಿ ಚಿಕ್ಕಮಗಳೂರು ಸಂಸದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಪಂಪೆಯ ಮೂಲಕ ಬೆಟ್ಟ ಹತ್ತಿ ಅಯ್ಯಪ್ಪನ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು 2024ರಲ್ಲಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಬೇಕೆಂದು ನಾನು ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದರು.

































