ಬೆಂಗಳೂರು: ಕಾಂಗ್ರೆಸ್ ಸರ್ಕಾರ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸುತ್ತಿದೆ ಎಂಬ ಶಾಸಕ ಶಾಮನೂರು ಹೇಳಿಕೆಗೆ ಮಾಜಿ ಸಿಎಂ ಬಿಎಸ್ವೈ ಪ್ರತಿಕ್ರಿಯಿಸಿದ್ದು, ಶಿವಶಂಕರಪ್ಪ ಹೇಳಿಕೆಗೆ ನನ್ನ ಸಂಪೂರ್ಣ ಸಹಮತವಿದೆ ಎಂದಿದ್ದಾರೆ.
ಶಾಮನೂರು ಹೇಳಿದ್ದು ಸಂಪೂರ್ಣವಾಗಿ ಸರಿಯಿದೆ. ಸಿದ್ದರಾಮಯ್ಯ ಅವರು ಎಲ್ಲ ಸಮುದಾಯದವರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿಲ್ಲ. ಕೆಲವು ಸಮುದಾಯಗಳಿಗೆ ಸೇರಿದ ಅಧಿಕಾರಿಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.